ಬೆಂಗಳೂರು
ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ
ಕೆಪಿಟಿಸಿಎಲ್ನಿಂದ ತುರ್ತು ನಿರ್ವಹಣಾ ಕಾಮಗಾರಿ ಕಾರಣ ಇಂದು ಜನವರಿ 16ರಂದು ಬೆಂಗಳೂರಿನ ಹಲವೆಡೆ ಬೆಳಗ್ಗೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್
ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ
ಬೆಂಗಳೂರು: ಗೋವುಗಳ ಕೆಚ್ಚಲು ಕತ್ತರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ ಖಂಡಿಸಿದ್ದಾರೆ. ಗೋವುಗಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಅಮಾನುಷ ಕ್ರೌರ್ಯವನ್ನು ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ
390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ
ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ
ನಟ ಸರಿಗಮ ವಿಜಿ ಇನ್ನಿಲ್ಲ
ಹಿರಿಯ ನಟ ಸರಿಗಮ ವಿಜಿ ಅವರು ಬುಧವಾರ (ಇಂದು) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ಆಗಿತ್ತು. ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12
ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!
ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿಕೊಂಡ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ
ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ
ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು. ಈ ಹೋಟೆಲ್‌ನಲ್ಲಿ ಈಗಾಗಲೇ
ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಲೆ
ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕೃತ್ಯ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ ಘಟನೆ
ಬಿಬಿಎಂಪಿಯಿಂದ ಖಾತಾ ಇಲ್ಲದ ಆಸ್ತಿಗಳಿಗೆ ಖಾತಾ ಮಾಡಿಕೊಳ್ಳಲು ಹೊಸ ಜಾಲತಾಣ ಬಿಡುಗಡೆ
ಬೆಂಗಳೂರು: ನಗರದಲ್ಲಿ ಬಿಬಿಎಂಪಿ ಖಾತಾ ಹೊಂದಿರದ ಸುಮಾರು 5 ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಇರಬಹುದೆಂದು ನಿರೀಕ್ಷಿಸಲಾಗಿದ್ದು, ಈ ಸ್ವತ್ತುಗಳು ಇಲ್ಲಿಯವರೆಗೆ ಯಾವುದೇ ಖಾತಾವಿಲ್ಲದೆ ಸಬ್ ರಿಜಿಸ್ಟಾರ್ ಕಛೇರಿಗಳಲ್ಲಿ ವಹಿವಾಟು ನಡೆಸುತ್ತಿದ್ದು, ಅವುಗಳಲ್ಲಿ ಹಲವು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ. ಸನ್ಮಾನ್ಯ
ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ
ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗ್ತಾರೆ. ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು




