Menu

ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

shivamogga news

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅ‍ಧ್ಯಕ್ಷತೆ ವಹಿಸಿದ್ದ  ಸಚಿವ ಮಧು ಬಂಗಾರಪ್ಪ ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು.

ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ. ಆದ್ದರಿಂದ ಪ್ರಾಧಿಕಾರದ ನೀರಾವರಿ ಇಂಜಿನಿಯರ್‌ರವರು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related Posts

Leave a Reply

Your email address will not be published. Required fields are marked *