Menu

ಭೋವಿ ನಿಗಮದ ಬಹುಕೋಟಿ ಹಗರಣ: ಮಾಜಿ ಎಂಡಿ ನಾಗರಾಜಪ್ಪಗೆ ಇಡಿ ಗ್ರಿಲ್

bhovi nigama

ಬೆಂಗಳೂರು : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿತ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ. ಕೆ‌. ನಾಗರಾಜಪ್ಪ ಅವರನ್ನು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಹಗರಣದ ಸಂಬಂಧ ನಿನ್ನೆ ನಾಗರಾಜಪ್ಪ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಅಂಬೇಡ್ಕರ್ ರಸ್ತೆಯಲ್ಲಿನ ವಿವಿ ಟವರ್‌ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು, ಅನುಮಾನಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಪ್ರಿಲ್ 4ರಂದು ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.

ಪರಿಶೀಲನೆ ವೇಳೆ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಡಿಜಿಟಲ್ ದಾಖಲೆಗಳು, ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಅವರನ್ನು ಬಂಧಿಸಲಾಗಿದೆ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಆರೋಪ? :

ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಈ ಸಂಬಂಧ ಶುಕ್ರವಾರ ನಿಗಮದ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯವನ್ನು ಇಡಿ ಅಧಿಕಾರಿಗಳು ಕೈಗೊಂಡಿದ್ದರು. ಈ ವೇಳೆ ವಿಚಾರಣೆ ನಡೆಸಿದ ವೇಳೆ ಸರಿಯಾದ ಮಾಹಿತಿ ನೀಡದಿದ್ದರಿಂದ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ.

Related Posts

Leave a Reply

Your email address will not be published. Required fields are marked *