Menu

ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್

sathish jarakiholi

ಹಿಂದೂ ಎಂಬುದು ಅಶ್ಲೀಲ ಎಂದು ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಗುರುವಾರ ಸತೀಶ್ ಜಾರಕಿಹೊಳಿ ವಿರುದ್ಧ ಸತ್ರ ನ್ಯಾಯಾಲಯ ಮೊಕದ್ದಮೆ ದಾಖಲಿಸಲು ನೀಡಿದ್ದ ಆದೇಶವನ್ನು ರದ್ದುಗೊಳಿಸಿತು.

ಕಾರ್ಯಕ್ರಮವೊಂದರಲ್ಲಿ ಲೋಕೋಪಯೋಗಿ ಸಚಿವ ಹಿಂದೂ ಎಂಬ ಪದ ಅಶ್ಲೀಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಧಾರ್ಮಿಕ ನಿಂದನೆ ಆರೋಪದಡಿ ಪ್ರಕರಣ ದಾಖಲಿಸುವಂತೆ ಸ್ಥಳೀಯ ಸತ್ರ ನ್ಯಾಯಾಲಯ ಆದೇಶಿಸಿತ್ತು.

ಸತ್ರ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸತೀಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದ ಹೈಕೋರ್ಟ್, ಪ್ರಕರಣ ರದ್ದುಗೊಳಿಸುವಂತೆ ಸೂಚಿಸಿದೆ.

Related Posts

Leave a Reply

Your email address will not be published. Required fields are marked *