ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಇಡಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಫೆ.10ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೂ ವಿಚಾರಣೆ ತಡೆ ನೀಡಿದೆ.
ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಇಲ್ಲದ ನನಗೆ ಇಡಿ ನೋಟಿಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಭೈರತಿ ಸುರೇಶ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಅಲ್ಲದೇ ಈ ಹಿಂದೆ ಈ ರೀತಿ ನೋಟಿಸ್ ಜಾರಿ ಮಾಡಿದ್ದನ್ನು ರದ್ದುಗೊಳಿಸಿ ನೀಡಿದ್ದ ತೀರ್ಪನ್ನು ಅರ್ಜಿಯಲ್ಲಿ ಪ್ರಶ್ನಿಸಿದ್ದರು.
ಇದೇ ವೇಳೆ ಭೈರತಿ ಸುರೇಶ್ ಅಲ್ಲದೇ ಪ್ರಕರಣದಲ್ಲಿ ನೋಟಿಸ್ ಜಾರಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೂ ಮುಂದಿನ ವಿಚಾರಣೆ ವರೆಗೂ ವಿಚಾರಣೆಯಿಂದ ವಿನಾಯಿತಿ ನೀಡಿದೆ. ಅಲ್ಲದೇ ಅಧಿಕಾರಿ ನಟೇಶ್ ಗೆ ನೀಡಿದ್ದ ಇಡಿ ಸಮನ್ಸ್ ರದ್ದುಪಡಿಸಿದೆ.