ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಬಂಧಿಸಿ ರಾತ್ರೋರಾತ್ರಿ ಬಿಡುಗಡೆ ಮಾಡಿದ್ದಾರೆ.
ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ದಾಖಲಿಕೊಂಡಿದ್ದ ಪೊಲೀಸರು ವಿಚಾರಣೆಗೆ ಕರೆದಿದ್ದರು.
ಸೋಮವಾರ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿದ್ದ ರಜತ್ ಮತ್ತು ವಿನಯ್ ಅವರನ್ನು ಬಸವೇಶ್ವರ ನಗರ ಪೊಲೀಸರು ನಂತರ ಬಂಧಿಸಿದ್ದಾರೆ. ನಂತರ ಇದು ಕೊನೆಯ ಎಚ್ಚರಿಕೆ ಆಗಿದ್ದು, ಪುನರಾರ್ವತೆ ಮಾಡಿದರೆ ಬಂಧಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ.
ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ಲಾಂಗ್ ಹಿಡಿದು ಕರಿಯ ಚಿತ್ರದ ಹಾಡಿಗೆ ರೀಲ್ಸ್ ಮಾಡಿದ್ದರು. ಬಸವೇಶ್ವರ ನಗರದಲ್ಲಿ ಸಾರ್ವಜನಿಕವಾಗಿ ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಿದ್ದು ಈಗ ಸಮಸ್ಯೆಗೆ ಕಾರಣವಾಗಿದೆ. ಅಲ್ಲದೇ ಈ ರೀಲ್ಸ್ ಅನ್ನು ಬುಜ್ಜಿ ಅನ್ನೋ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಲಾಗಿತ್ತು.