ಗದಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಓವರ್ ಸ್ಪೀಡ್ ಕಾರಣ ಡಿವೈಡರ್‌ಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾನಗಲ್ ತಾಲೂಕಿನ ದ್ಯಾಮನಕೊಪ್ಪ ನಿವಾಸಿ ಗಣೇಶ ಸೋಮಪ್ಪ ನ್ಯಾರಲಘಂಟಿ (36) ಮೃತ ಯುವಕ. ಬೈಕ್‌ನಲ್ಲಿ ಹಿಂದೆ ಕೂತಿದ್ದ ಮಹಿಳೆ, ವೃದ್ಧ ಹಾಗೂ 4 ವರ್ಷದ ಮಗು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲ ಬೈಕ್‌ನಲ್ಲಿ ಹಾವೇರಿಯಿಂದ ಕೊಪ್ಪಳಕ್ಕೆ ಗೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಅತಿಯಾದ ವೇಗವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಬೈಕ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.