ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.
ಡಿಸೆಂಬರ್ 26ರಂದು ಹೈಕೋರ್ಟ್ ರಜಾಕಾಲಪೀಠ ಬೈರತಿ ಬಸವರಾಜ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ರಜಾಕಾಲಪೀಠದ ಆದೇಶ ಪ್ರಶ್ನಿಸಿ ಸಿಐಟಿ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ವಜಾಗೊಳಿಸಿ ಆದೇಶ ನೀಡಿದೆ.
ಕಳೆದ ಜುಲೈ 15ರ ರಾತ್ರಿ ಬಿಲ್ಲು ಶಿವನನ್ನು ಹತ್ಯೆ ಮಾಡಲಾಗಿತ್ತು. 2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮಿನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ಜನರ ಗುಂಪು ಮಾರಕ ಆಯುಧಗಳಿಂದ ಕೊಚ್ಚಿ ಆತನ ತಾಯಿ ಎದುರು ಕೊಲೆ ಮಾಡಲಾಗಿತ್ತು. ಬಿಕ್ಷು ಶಿವನ ತಾಯಿ ವಿಜಯಲಕ್ಷ್ಮಿ ಸಲ್ಲಿಸಿದ್ದ ದೂರು ಆಧರಿಸಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ಆಗ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಂಡಿದ್ದು, ಬಿಜೆಪಿ ಶಾಸಕ ಬೈರತಿ ಬಸವರಾಜ್ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳು ಅವರಿಗಾಗಿ ಹುಡುಕಾಟ ನಡೆಸಿ ಬಂಧಿಸಿದ್ದರು.
ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಒಳಸಂಚು ನಡೆಸಿರುವ ಆರೋಪ ಎದುರಿಸುತ್ತಿರುವ ಬೈರತಿ ಬಸವರಾಜ್, ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿರುವುದು ಪತ್ತೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದರ ಬಗ್ಗೆ ಸಾಕ್ಷ್ಯಗಳಿವೆ ಎಂದು ಹೈಕೋರ್ಟ್‌ನಲ್ಲಿ ಎಸ್‌ಪಿಪಿ ಜಗದೀಶ್ ವಾದಿಸಿದ್ದರು.


