Menu

ರಸ್ತೆ ಗುಂಡಿ ವಿವಾದದ ನಂತರ ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಂಜುಂದಾರ್!

dcm dk shivakumar

ರಾಜಧಾನಿಯ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಆರೋಪ-ಪ್ರತ್ಯಾರೋಪದ ನಂತರ ಬಯೋಕಾನ್‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಸದಾಶಿವನಗರದ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಕಿರಣ್ ಮಜುಂದಾರ್ ದೀಪಾವಳಿ (ಹಬ್ಬದ ಶುಭಾಶಯ ತಿಳಿಸಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿಯ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೇ ಕಿರಣ್ ಮಜುಂದಾರ್ ಶಾ ತೆರಳಿದರು.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡಿಕೆಶಿ, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಕಥೆಯ ಮುಂದಿನ ಹಾದಿಯ ಕುರಿತು ನಾವು ಉತ್ತಮ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *