ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಬನಶಂಕರಿಯ ಅನಂತ್ ಕುಮಾರ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬನಶಂಕರಿ ಮೂಲದ ಅನಂತ್ ಕುಮಾರ್, ಕಳೆದ ಎರಡು ತಿಂಗಳಿನಿಂದ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


