Menu

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ  ಹೇಳಿದ್ದಾರೆ.

ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದರು.

ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸ ಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ. ಸ್ಪೀಕರ್‌ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ,  ಯಾವುದೇ ಸ್ಪೀಕರ್‌ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ ಎಂದರು.

ಕಾಂಗ್ರೆಸ್‌ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್‌ ಎಂದು ಹೇಳುವವರಿಗೆ ಆಪರೇಶನ್‌ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.

ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಮ್ಮ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ಗೌರವಾ ನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್‍ಐ ನಂಟು ಕೂಡ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *