Thursday, February 12, 2026
Menu

ರಾಹುಲ್ ಗಾಂಧಿಯ ಲೋಕಸಭೆ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಆಗ್ರಹ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮುಗಿಬಿದ್ದಿರುವ ಆಡಳಿತರೂಢ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸಲು ಆಗ್ರಹಿಸಿ ನೋಟಿಸ್ ಸಲ್ಲಿಸಿದೆ.

ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು ‘ನಿಲುವಳಿ ಪ್ರಸ್ತಾವನೆ’ ಸಲ್ಲಿಸಿದ್ದೇನೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ. ಬುಧವಾರ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಟೀಕಿಸಿ ರಾಹುಲ್ ಸಂಸತ್ತಿನಲ್ಲಿ ಭಾಷಣ ಮಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ.

ತಮ್ಮ ನೋಟಿಸ್‌ನಲ್ಲಿ ರಾಹುಲ್ ಗಾಂಧಿಯವರು ಸೊರೊಸ್ ಫೌಂಡೇಶನ್, ಯುಎಸ್‌ಐಐಡಿ, ಫೋರ್ಡ್ ಫೌಂಡೇಶನ್‌ನೊಂದಿಗೆ ಕೈಜೋಡಿಸಿ ವಿದೇಶಗಳಿಗೆ ಹೇಗೆ ಭೇಟಿ ನೀಡುತ್ತಾರೆ ಮತ್ತು ಭಾರತ ವಿರೋಧಿ ಹೇಳಿಕೆಗಳನ್ನು ಉಲ್ಲೇಖಿಸಿದ್ದೇನೆ, ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ ಎಂದು ದುಬೆ ತಿಳಿಸಿದ್ದಾರೆ. ರಾಹುಲ್ ಗಾಂಧಿಯ ಸಂಸತ್‌ ಸದಸ್ಯತ್ವವನ್ನು ರದ್ದುಗೊಳಿಸಬೇಕು ಹಾಗೂ ಜೀವಿತಾವಧಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾಗಿ ಹೇಳಿದ್ದಾರೆ.

ಮೋದಿಯವರೇ ನೀವು ಭಾರತವನ್ನು ಮಾರುತ್ತಿದ್ದೀರಿ, ಇದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ರಾಹುಲ್ ಗಾಂಧಿ ಸಂಸತ್ತಿನಲ್ಲಿ ವಾಗ್ದಾಳಿ ನಡೆಸಿದ್ದರು. ಅಮೆರಿಕ ಡಾಲರ್‌ ರಕ್ಷಿಸಿಕೊಳ್ಳಲು ಮುಂದಾದರೆ, ಭಾರತೀಯ ಡೇಟಾ ದೊಡ್ಡ ಆಸ್ತಿ ಎಂದು ಮೊದಲು ತಿಳಿದುಕೊಳ್ಳಬೇಕು. ಅಮೆರಿಕದ ಅಧ್ಯಕ್ಷ ಟ್ರಂಪ್‌ ನಮ್ಮನ್ನು ಪಾಕಿಸ್ತಾನಕ್ಕೆ ಸಮಾನವಾಗಿ ಕಾಣಲು ಐಎನ್‌ಡಿಐಎ ಕೂಟದ ಸರಕಾರ ಇದ್ದಿದ್ದರೆ ಖಂಡಿತ ಬಿಡುತ್ತಿರಲಿಲ್ಲ ಎಂದು ಹೇಳಿದ್ದರು.

Related Posts

Leave a Reply

Your email address will not be published. Required fields are marked *