ಹರಿದ್ವಾರದಲ್ಲಿ ತನ್ನ ಬಾಯ್‌ಫ್ರೆಂಡ್ ಹಾಗೂ ಆತನ ಸ್ನೇಹಿತನಿಂದಲೇ ಸ್ವಂತ ಅಪ್ರಾಪ್ತ ವಯಸ್ಕ ಮಗಳ ಮೇಲೆ ತಾಯಿಯೇ ಅತ್ಯಾಚಾರ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಸಂತ್ರಸ್ತೆಯ ತಾಯಿ, ಬಿಜೆಪಿ ನಾಯಕಿ ಅನಾಮಿಕಾ ಶರ್ಮಾ, ಬಾಯ್‌ಫ್ರೆಂಡ್ ಸುಮಿತ್ ಪತ್ವಾಲ್ ಮತ್ತು ಆತನ ಸ್ನೇಹಿತ ಶುಭಂನನ್ನು ಪೊಲೀಸರು ಬಂಧಿಸಿದ್ದಾರೆ.
ಹರಿದ್ವಾರದ ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ಅನಾಮಿಕಾ ಶರ್ಮಾ ತನ್ನ 13 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಮಾಡಿಸಿದ್ದಾಳೆ. ಪ್ರಕರಣ ಬಹಿರಂಗಗೊಂಡ ಬಳಿಕ ಬಿಜೆಪಿ ಆಕೆಯನ್ನು ಪಕ್ಷದಿಂದಲೇ ವಜಾ ಮಾಡಿದೆ. ಅನಾಮಿಕಾ ಶರ್ಮಾ 2024ರ ವರೆಗೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ದ್ದಳು. ಆಕೆ ಗಂಡನಿಂದ ಪ್ರತ್ಯೇಕವಾಗಿದ್ದಳು.
ಆದರೆ ಮಗಳು ಅಪ್ಪನೊಂದಿಗೆ ಉಳಿದುಕೊಂಡಿದ್ದಳು. ಅಪರೂಪಕ್ಕೆ ತಾಯಿ ಬಳಿ ಬರುತ್ತಿದ್ದಳು. ಈ ವೇಳೆ ಅನಾಮಿಕಾ, ಸುಮಿತ್‌ನ ಹೋಟೆಲ್‌ನಲ್ಲಿಯೇ ಉಳಿದುಕೊಂಡಿದ್ದಳು. ಹರಿದ್ವಾರ, ಬೃಂದಾವನ ಮತ್ತು ಆಗ್ರಾದಲ್ಲಿ ಹಲವು ಬಾರಿ ಮಗಳ ಮೇಲೆ ಸುಮಿತ್ ಹಾಗೂ ಆತನ ಸ್ನೇಹಿತ ಶುಭಂನಿಂದ ಅತ್ಯಾಚಾರ ಮಾಡಿಸಿದ್ದಳು. ಈ ವಿಚಾರ ತಂದೆಗೆ ಹೇಳದಂತೆ ಬೆದರಿಕೆಯೂ ಹಾಕಿದ್ದಳು ಎನ್ನಲಾಗಿದೆ.
ಘಟನೆ ಬಗ್ಗೆ ಸಂತ್ರಸ್ತೆ ತಂದೆಗೆ ಮಾಹಿತಿ ನೀಡಿದ್ದಳು. ತಂದೆ ನೀಡಿದ ದೂರಿನ ಅನ್ವಯ ಪೊಲೀಸರು ಮೂವರನ್ನು ಬಂಧಿಸಿ ಪೋಕ್ಸೋ ಕಾಯ್ದೆ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.