ಬಿಜೆಪಿ ಸ್ಥಳೀಯ ನಾಯಕಿ ಮಂಜುಳಾ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ ಮಂಡಲ ಕಾರ್ಯದರ್ಶಿ ಆಗಿದ್ದ ಮಂಜುಳಾ ಮತ್ತಿಕೆರೆಯ ತಮ್ಮ ಮನೆಯಲ್ಲಿ ಮಂಗಳವಾರ ಮಧ್ಯಾಹ್ನ ೨.೩೦ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡಲ ಕಾರ್ಯದರ್ಶಿ ಆಗಿದ್ದ ಮಂಜುಳಾ ಅವರ ಅಧಿಕಾರಾವಧಿ ನಿನ್ನೆಯಷ್ಟೇ ಮುಕ್ತಾಯಗೊಂಡಿದ್ದು, ನನ್ನ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿದ್ದು, ಎಂಎಸ್ ರಾಮಯ್ಯ ಆಸ್ಪತ್ರೆಗೆ ಶವವನ್ನು ರವಾನಿಸಲಾಗಿದೆ.