ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನ

ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನ

ಬೆಂಗಳೂರು: ಹಾನಗಲ್ ಕ್ಷೇತ್ರದ ಶಾಸಕರು ಹಾಗೂ ಮಾಜಿ ಬಿಜೆಪಿ ಸಚಿವರಾದ  ಸಿ.ಎಂ. ಉದಾಸಿ ಅವರು ವಿಧಿವಶರಾದರು.

ಅವರಿಗೆ 84 ವರ್ಷ ವಯಸ್ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾದರು. ರಕ್ತ ಸಂಬಂಧಿ‌ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಗುರುವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.

1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಪಡೆದಿದ್ದರು. ಈ ಹಿಂದೆ ಯಡಿಯೂರಪ್ಪ ರವರ ಸರ್ಕಾರದಲ್ಲಿ ಸಚಿವರಾಗಿದ್ದರು.ಆರು ಬಾರಿ ಹಾನಗಲ್ ಕ್ಷೇತ್ರದಲ್ಲಿ ಗೆಲುವು ಪಡೆದಿದ್ದರು.

ಸಿಎಂ ಉದಾಸಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ಡಿಸಿಎಂ ಅಶ್ವತ್ಥ ನಾರಾಯಣ್, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ .

, ,

Leave a Reply

Your email address will not be published. Required fields are marked *