ಮಾರ್ಚ್ 16 ರಂದು ನಡೆಯಲಿರುವ ಸಂಸತ್ತಿನ ಮೇಲ್ಮನೆ ಚುನಾವಣೆಗೆ ಬಿಜೆಪಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿ ಒಂಬತ್ತು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಿತಿನ್ ನಬಿನ್ ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದೆ.
ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು ರಾಜ್ಯಗಳಿಗೆ ದ್ವೈವಾರ್ಷಿಕ ಚುನಾವಣೆ ಮಾರ್ಚ್ 16 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಏಪ್ರಿಲ್‌ನಲ್ಲಿ ಈ 37 ರಾಜ್ಯಸಭೆಯ ಸ್ಥಾನಗಳು ಖಾಲಿಯಾಗುತ್ತಿವೆ. ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಬಿಹಾರ ಸೇರಿದಂತೆ 10 ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನವೇ ಮತ ಎಣಿಕೆ ನಡೆಯಲಿದೆ.


