Thursday, January 30, 2025
Menu

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಳಿಸಿ: ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಸುಧಾಕರ್!

sudhakar

ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವ ವಿಜಯೇಂದ್ರ ಅವರನ್ನು ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸಂಸದ ಕೆ.ಸುಧಾಕರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ವಿರುದ್ಧ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡುವ ಮೂಲಕ ಬಂಡಾಯ ಘೋಷಿಸಿದರು. ಅಲ್ಲದೇ ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ವಿಜಯೇಂದ್ರ ಅವರಿಗೆ ಸುಧಾಕರ್ ಬಹಿರಂಗ ಸವಾಲು ಹಾಕಿದ್ದಾರೆ.

ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದ ಆರೋಪಿಸಿದ ಸುಧಾಕರ್, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ತಮಗೆ ಬೇಕಾದವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರನ್ನು ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದರು.

ಬಿಜೆಪಿಯನ್ನು ನಂಬಿ ಇಲ್ಲಿ ಆಂತರಿಕ ಪ್ರಜಾಪ್ರಭುತ್ವ, ಆರ್ಎಸ್ಎಸ್ ಆದರ್ಶ ಇದೆ ಎಂದು ಪಕ್ಷದ ತತ್ವ ಸಿದ್ದಾಂತ ಒಪ್ಪಿ ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡಿದೆ. ಬಿಜೆಪಿಗೆ ಮರಳು ಭೂಮಿಯಂತಿದ್ದ ಚಿಕ್ಕಬಳ್ಳಾಪುರದಲ್ಲಿ ನನ್ನ ರಾಜಕೀಯ ಭವಿಷ್ಯವನ್ನು ಒತ್ತೆ ಇಟ್ಟು ಬಿಜೆಪಿ ಸೇರಿದ್ದೆ. ಯಡಿಯೂರಪ್ಪನವರನ್ನು ಸಿಎಂ ಮಾಡಬೇಕು ಎಂದು 17 ಜನ ಬಿಜೆಪಿಗೆ ಬಂದೆವು ಎಂದು ಅವರು ಹೇಳಿದರು.

ಯಡಿಯೂರಪ್ಪನವರು ರಾಜೀನಾಮೆ ಕೊಟ್ಟ ಮೇಲೆ ಬೊಮ್ಮಾಯಿ ಅವರ ಜೊತೆ ಕೂಡಾ ಅಷ್ಟೇ ವಿಶ್ವಾಸದಿಂದ ಕೆಲಸ ಮಾಡಿದ್ದೇನೆ. ಅಂತಿಮವಾಗಿ ನನಗೆ ಬಿಜೆಪಿ ತತ್ವ ಸಿದ್ದಾಂತ ಅಷ್ಟೇ ಮುಖ್ಯ. ಪಕ್ಷ ಏನು ಹೇಳಿದೆಯೋ ಅದನ್ನು ಮಾಡಿಕೊಂಡು ಬಂದಿದ್ದೇನೆ. ಒಂದು ಬಾರಿ ನನಗೆ ಚಿಕ್ಕಬಳ್ಳಾಪುರದಲ್ಲಿ ಆಘಾತ ಆಯಿತು. ಇವತ್ತು ಪಕ್ಷ ಕಟ್ಟುತ್ತೇವೆ ಎಂದು ಹೊರಟಿದ್ದವರು ಟಾರ್ಗೆಟ್ ಮಾಡಿ ಸೋಲಿಸುವಂತಹ ಪ್ರಯತ್ನ ಮಾಡಿದರು ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

ಯಾರನ್ನೂ ವಿಶ್ವಾಸಕ್ಕೆ ತೆಗದುಕೊಳ್ಳುವ ಜಾಯಮಾನ ಅವರದ್ದು ಅಲ್ಲ. ಇವರ ದರ್ಪ, ಇವರ ಅಹಂಕಾರ. ಅವರ ಹತ್ತಿರ ಸಾವಿರಾರು ಕೋಟಿ ಇರಬಹುದು. ಇವರ ಹಿಂಬಾಲಕರು ನನ್ನ ಸೋಲಿಸಲು ಪ್ರಯತ್ನ ಪಟ್ಟರು. ಜಿಲ್ಲಾಧ್ಯಕ್ಷರ ವಿಚಾರಕ್ಕೆ ಸೌಜನ್ಯಕ್ಕೂ ನನ್ನ ಜೊತೆ ಚರ್ಚೆ ಮಾಡಿಲ್ಲ. ಫೋನ್ ಮಾಡಿದರೂ ರೆಸ್ಪಾಂಡ್ ಮಾಡಲ್ಲ. ನಡ್ಡಾ ಅವರಿಗೆ ಮೆಸೇಜ್ ಹಾಕಿದರೆ ಅಪಾಯಿಂಟ್ ಮೆಂಟ್ ಕೊಡುತ್ತಾರೆ. ಆದರೆ ಇವರು ೨-೩ ಬಾರಿ ಅಪಾಯಿಂಟ್ ಮೆಂಟ್ ಫಿಕ್ಸ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ನಮ್ಮನ್ನು ತುಳಿಯಲು, ಸಮಾಧಿ ಮಾಡಲು ಹೊರಟಿದ್ದೀರಾ? ಎಂದು ಸುಧಾಕರ್ ಪ್ರಶ್ನಿಸಿದರು.

Related Posts

Leave a Reply

Your email address will not be published. Required fields are marked *