Menu

ಹುಬ್ಬಳ್ಳಿ-ಧಾರವಾಡ ಪಾಲಿಕೆ ಬಿಜೆಪಿ ಪಾಲು: ಜ್ಯೋತಿ ನೂತನ ಮೇಯರ್ ಆಗಿ ಆಯ್ಕೆ

hubli dharwad

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರರಾಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಕಾಂಗ್ರೆಸ್​ ನ ಸುವರ್ಣಾ ಕಲಕುಂಟ್ಲಾ ವಿರುದ್ಧ ಬಿಜೆಪಿಯ ಜ್ಯೋತಿ ಪಾಟೀಲ್ 47 ಮತಗಳನ್ನು ಪಡೆದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಆಯ್ಕೆಯಾದರೆ, 49ನೇ ವಾರ್ಡ್ ಸದಸ್ಯೆ ಸಂತೋಷ ಚವ್ಹಾಣ 47 ಮತಗಳೊಂದಿಗೆ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಉಪಮಹಾಪೌರ ಸ್ಥಾನಕ್ಕೆ ಮಹಾನಗರ ಪಾಲಿಕೆಯ 14ನೇ ವಾರ್ಡ್ ಸದಸ್ಯರಾದ ಶಂಭುಗೌಡ ರುದ್ರಗೌಡ ಸಾಲಮನಿ ಅವರು ಸ್ಪರ್ಧೆ ಮಾಡಿದ್ದರು. ಮಹಾಪೌರ ಸ್ಥಾನಕ್ಕೆ ಕಾಂಗ್ರೆಸ್​ ನಿಂದ ಮಹಾನಗರ ಪಾಲಿಕೆಯ 59ನೇ ವಾರ್ಡ್ ಸದಸ್ಯರಾದ ಸುವರ್ಣ ಕಲಕುಂಟ್ಲ ಹಾಗೂ 76 ನೇ ವಾರ್ಡ್​ ಸದಸ್ಯರಾದ ವಹೀದಾ ಖಾನಂ ಅಲ್ಲಾಭಕ್ಷ ಕಿತ್ತೂರು ಅವರು ಸ್ಪರ್ಧಿಸಿದ್ದರು.

ಮಹಾಪೌರ ಮತ್ತು ಉಪ ಮಹಾಪೌರ ಚುನಾವಣೆಯಲ್ಲಿ ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತ ಚಲಾಯಿಸಿದರು. ಈ ವೇಳೆ ಬಿಜೆಪಿಗೆ ಮಹಾಪೌರ ಹಾಗೂ ಉಪಮಹಾಪೌರ ಒಲಿದಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಗೆ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆಯಲ್ಲಿ 87 ಜನರು ಪಾಲ್ಗೊಂಡಿದ್ದರು. ಮೂರು ಜನ ಸದಸ್ಯರು ಗೈರು ಹಾಜರಾಗಿದ್ದರು.

ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಎಸ್.ಎಸ್.ಬಿರಾದಾರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

Related Posts

Leave a Reply

Your email address will not be published. Required fields are marked *