Menu

ಕೆಪಿಸಿಸಿ ಅಧ್ಯಕ್ಷತೆ ಜೊತೆಗೆ ಬಿಕೆ ಹರಿಪ್ರಸಾದ್‌ಗೆ ಮತ್ತೆ ಎಂಎಲ್ಸಿ ಸ್ಥಾನ

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕಗೊಳಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಏಳು ಸ್ಥಾನಗಳಿಗೆ ಜೂನ್ 18 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಕೆ ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಮತ್ತು ಶಿವಣ್ಣ ಮಳವಳ್ಳಿ ಹೆಸರು ಅಂತಿಮಗೊಳಿಸಿದ್ದಾರೆ. ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರಿಸಲಾಗಿದೆ. ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರನ್ನೇ ಆಯ್ಕೆ ಮಾಡಲಾಗಿದೆ.

Related Posts

Leave a Reply

Your email address will not be published. Required fields are marked *