ಅಹಮದಾಬಾದ್‌ನಲ್ಲಿ ಗುರುವಾರ ನಡೆದ ಏರ್ ಇಂಡಿಯಾ ವಿಮಾನ ಪತನ ಏಕೆ, ಹೇಗೆ ಎಂಬ ಬಗ್ಗೆ ಖಚಿತ ಮಾಹಿತಿ ನೀಡಬಲ್ಲ 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.
ವಿಮಾನದಲ್ಲಿದ್ದ 2 ಬ್ಲ್ಯಾಕ್ ಬಾಕ್ಸ್‌ಗಳಲ್ಲಿ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿದೆ. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದಾರೆ.
2ನೇ ಬ್ಲ್ಯಾಕ್ ಬಾಕ್ಸ್ ಪ್ರಕರಣದ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ತಿಳಿಯಲು ನೆರವಾಗಲಿದೆ. ಕಾಕ್‌ಪಿಟ್ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಖಚಿತ ಮಾಹಿತಿಯನ್ನು ನೀಡುತ್ತದೆ. ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಯಾಂತ್ರಿಕ ಶಬ್ದಗಳ ಮಾಹಿತಿ ಇದರಲ್ಲಿ ಸಂಗ್ರಹವಾಗಿರುತ್ತದೆ.
ಜೂನ್ 12 ಗುರುವಾರ ಅಹಮಾದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಪತನಗೊಂಡು ಅದರಲ್ಲಿದ್ದ 241 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ.