Wednesday, February 04, 2026
Menu

ನಮ್ಮ ಮೆಟ್ರೊ ಟಿಕೆಟ್‌ ದರ ಶೇ5 ಹೆಚ್ಚಳಕ್ಕೆ ಬಿಎಂಆರ್‌ಸಿಎಲ್ ಬೋರ್ಡ್ ಸಮ್ಮತಿ

ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ5ರಷ್ಟು ಹೆಚ್ಚಿಸಲು ಬಿಎಂಆರ್‌ಸಿಎಲ್ ಬೋರ್ಡ್ ಸಮ್ಮತಿಸಿದ್ದು, ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಸಿಗಬೇಕಿದೆ. ಕಳೆದ ವರ್ಷ ಮೆಟ್ರೋ ಟಿಕೆಟ್‌ ದರ ಏರಿಕೆಯಿಂದ ಬೇಸತ್ತಿರುವ ಪ್ರಯಾಣಿಕರು ಮತ್ತೆ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈಗ ಬಿಎಂಆರ್‌ಸಿಎಲ್ ಬೋರ್ಡ್ ಸಭೆಯಲ್ಲಿ ಶೇ5 ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ಸಿಕ್ಕಿದ್ದು, ರಾಜ್ಯ ಸರ್ಕಾರದ ಅನುಮತಿಗೆ ಅಧಿಕಾರಿಗಳು ಸಾಹಸ ಪಡುತ್ತಿದ್ದಾರೆ. ಮತ್ತೆ ದರ ಏರಿಕೆಯ ವಿಚಾರ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ ಅಧಿಕಾರಿಗಳು ದುಪ್ಪಟ್ಟು ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರುಆಕ್ರೋಶ ವ್ಯಕ್ತಪಡಿಸಿದ್ದರು. ಬೆಂಗಳೂರು ಮೆಟ್ರೊ ದರ ನಿಗದಿ ಸಮಿತಿ ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳು ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದರು.

ಮೊದಲು ತಪ್ಪು ಲೆಕ್ಕ ಕೊಟ್ಟು ಏರಿಕೆ ಮಾಡಿರುವ ದರವನ್ನು ಇಳಿಸಲಿ, ನಂತರ ಪ್ರತಿವರ್ಷ ಬೇಕಾದರೆ 5% ರಷ್ಟು ಏರಿಕೆ ಮಾಡಲಿ ಎಂದು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದರು. ಆದರೆ ಇಷ್ಟೆಲ್ಲ ವಿರೋಧದ ನಡುವೆಯೂ ಮೆಟ್ರೋ ದರ ಏರಿಕೆಗೆ ಮುಂದಾಗಿದೆ.

Related Posts

Leave a Reply

Your email address will not be published. Required fields are marked *