ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಪತ್ನಿ ಜಯಂತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಿಮ್ಮಪ್ಪ ಮೂಲ್ಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದರೆ, ಪತ್ನಿಯ ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ.
ತಿಮ್ಮಪ್ಪ ಅವರ ಮನೆ ಮಿತ್ತಮಜಲಿನಲ್ಲಿದ್ದು, ಪತ್ನಿಯ ಮನೆ ಬಡಗುಂಡಿಯಲ್ಲಿದೆ. 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಮಕ್ಕಳಾಗಿರಲಿಲ್ಲ. ಈಗ ಜಯಂತಿ ಗರ್ಭಿಣಿಯಾಗಿದ್ದು, ಜು.2ಕ್ಕೆ ಸೀಮಂತದ ದಿನಾಂಕ ನಿಗದಿಯಾಗಿತ್ತು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.