ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಅನುಮಾನಕ್ಕೆ ಕಾರಣವಾಗಿದೆ. ಗ್ರಾಮದ ಮುನಿರಾಜು (42) ಮನೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿ.
ಪತ್ನಿಯ ಅಕ್ರಮ ಸಂಬಂಧದಿಂದ ನೊಂದಿದ್ದ ಮುನಿರಾಜು ಸಾವಿಗೆ ಆತನ ಪತ್ನಿ ಸುನಿತಾಳೇ ಕಾರಣ ಎಂಬ ಆರೋಪ ಕೇಳಿ ಬರುತ್ತಿದೆ. ಆಕೆ ಪದೇ ಪದೆ ಮನೆ ಬಿಟ್ಟು ಬೇರೊಬ್ಬನ ಜೊತೆ ಹೋಗುತ್ತಿದ್ದಾಳೆಂದು ಮುನಿರಾಜು ಬೇಸರಗೊಂಡಿದ್ದ. ಇದೇ ಹಿನ್ನೆಲೆ ಶುಕ್ರವಾರ ಮಧ್ಯರಾತ್ರಿ ಒಂದು ಗಂಟೆಯವರೆಗೂ ಸ್ಥಳೀಯರು ಹಾಗೂ ಪತ್ನಿಯ ಸಂಬಂಧಿಕರು ನ್ಯಾಯ ಪಂಚಾಯಿತಿ ನಡೆಸಿದ್ದರು ಎನ್ನಲಾಗಿದೆ.
ಯುವಕನ ಕೈಕಾಲು ಕಟ್ಟಿ ಹಾಕಿ ಕೊಲೆ
ಯುವಕನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾತ ಬರುತ್ತಿದ್ದು, ನೋಡಿದಾಗ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಮಾಲಿಕ ನಟರಾಜ್ ಎರಡು ತಿಂಗಳ ಹಿಂದೆ ಮೋಹನ್ ಕೃಷ್ಣ ಮತ್ತು ಊರ್ವಶಿ ಎಂಬವರಿಗೆ ಬಾಡಿಗೆಗೆ ನೀಡಿದ್ದರು. ಊರ್ವಶಿ ಸಿನೆಮಾ ಸಹ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದೆನೆ ಎಂದು ಹೇಳಿಕೊಂಡಿದ್ದಳು. ಬಾಡಿಗೆ ಅಗ್ರಿಮೆಂಟ್ ಮಾಡಿಸಬೇಕು ಅಂದುಕೊಳ್ಳುವಷ್ಟರಲ್ಲಿ ಮುಂದಿನ ತಿಂಗಳು ಮನೆ ಖಾಲಿ ಮಾಡುವುದಾಗಿ ತಿಳಿಸಿದ್ದಳು. ಬಳಿಕ ನಟರಾಜ್ ಮನೆ ಬಳಿ ಬಂದಾಗೆಲ್ಲ ಬಾಗಿಲಿಗೆ ಬೀಗ ಹಾಕಿರುತ್ತಿತ್ತು.
ಇತ್ತೀಚೆಗೆ ಅಕ್ಕಪಕ್ಕದ ಮನೆಯವರು ನಟರಾಜ್ ಮಗನಿಗೆ ಫೋನ್ ಮಾಡಿ ನಿಮ್ಮ ಮನೆಯಿಂದ ಏನೋ ಕೆಟ್ಟ ವಾಸನೆ ಬರುತ್ತಿರುವುದಾಗಿ ತಿಳಿಸಿದ್ದಾರೆ. ಬಂದು ನೋಡಿದಾಗ ಕೊಲೆಯಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗೂ ಮುನ್ನ ಮನೆಯಲ್ಲಿ ಪಾರ್ಟಿ ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ.


