Menu

ಕೆಆರ್ ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಬಾವಿಯಲ್ಲಿ ಪತ್ತೆ

ಮಂಡ್ಯದ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ ಎಂದು ಗುರುತಿಸಲಾಗಿದೆ.

​ಕರಣ್ ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ ಬೈಕ್ ಮತ್ತು ಮೊಬೈಲ್ ಅನುಮಾನಾಸ್ಪದ ಸ್ಥಿತಿಯಲ್ಲಿ ಕಂಡು ಬಂದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

​ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ತಿಳಿಯಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಈ ಸಂಬಂಧ ಕೆಆರ್ ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಆಕೆಯ ಆತ್ಮಹತ್ಯೆಗೆ ಕಾರಣವೇನೆಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿಕ್ಷಕರ ನಿರಂತರ ಮಾನಸಿಕ ಕಿರುಕುಳದಿಂದಾಗಿ ತನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬಾಲಕಿಯ ತಂದೆ ಆರೋಪಿಸಿದ್ದಾರೆ. ಆಕೆ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದಳು ಎಂದು ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ಜೈಪುರದಲ್ಲಿ ಖಾಸಗಿ ಶಾಲೆಯ ನಾಲ್ಕನೇ ಮಹಡಿಯಿಂದ ಹಾರಿ 9 ವರ್ಷದ ಬಾಲಕಿ ಮೃತಪಟ್ಟಿದ್ದಳು. ಕೃತ್ಯದ ಹಿಂದಿನ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ. ಪೋಷಕರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಅನುಮಾನಾಸ್ಪದ ಸಾವು ಎಂದು ಆರೋಪಿಸಿದ್ದಾರೆ.

Related Posts

Leave a Reply

Your email address will not be published. Required fields are marked *