Friday, September 25, 2026
Menu

ಕಲಬುರಗಿ ರೈಲು ಹಳಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ನಗರದ ಡಬರಾಬಾದ್ ಕ್ರಾಸ್ ನಿವಾಸಿ ಕಸ್ತೂರಿ (21) ಎಂದು ಗುರುತಿಸಲಾಗಿದೆ.

ಕಸ್ತೂರಿ ಕಲಬುರಗಿಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ತೆರಳಿದ್ದ ಆಕೆ ಕಾಲೇಜು ಮುಗಿದ ಬಳಿಕ ಬಿದ್ದಾಪುರ ಕಾಲೋನಿ ಸಮೀಪದ ರೈಲುಹಳಿ ಕಡೆ ತೆರಳಿದ್ದರು ಎನ್ನಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಕಸ್ತೂರಿ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು

ಬೆಂಗಳೂರಿನ ಆನೇಕಲ್‌ ಬಳಿಹೊಸೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಇಂಚರ (20) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ.

ಆಕೆ ಹೊಂಪಲಘಟ್ಟ ಗ್ರಾಮದ ನಿವಾಸಿಯಾಗಿದ್ದು ಬಿಸಿಎ ವ್ಯಾಸಂಗ ಮಾಡುತ್ತಿದ್ದಉ. ಎಂದಿನಂತೆ ಸ್ಕೂಟಿಯಲ್ಲಿ ಬಂದು ಕಾಲೇಜು ಮುಗಿಸಿಕೊಂಡು ಮನೆ ಕಡೆ ಹೋಗುವಾಗ ಅಪಘಾತ ನಡೆದಿದೆ. ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ, ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related Posts

Leave a Reply

Your email address will not be published. Required fields are marked *