Menu

ಮದ್ದೂರು ವಿದ್ಯಾರ್ಥಿನಿಯ ಶವ ಚನ್ನಪಟ್ಟಣ ಕೆರೆಯಲ್ಲಿ ಪತ್ತೆ

ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಶವ ಪತ್ತೆಯಾಗಿದೆ. ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ ಹೊತ್ತಿಗೆ ಸಿಂಗರಾಜಿಪುರ ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್ ಪತ್ತೆಯಾಗಿತ್ತು.

ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದು, ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *