ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ವಿಧಿವಶ

ಮುಂಬೈ, ಜುಲೈ 7  ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು .
ವಸವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಅವರಿಗೆ ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾಗಿದ್ದಾರೆ.

ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್ ಕುಮಾರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಿಧನದ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.
ಕುಮಾರ್ ವೃತ್ತಿಜೀವನದಲ್ಲಿ 65 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ‘ದೇವದಾಸ್’ (1955), ‘ನಯಾ ದೌರ್’ (1957), ‘ಮೊಘಲ್-ಎ-ಅಜಮ್’ (1960), ‘ಗಂಗಾ ಜಮುನಾ’ ಮುಂತಾದ ಚಲನಚಿತ್ರಗಳಲ್ಲಿ ಅಪ್ರತಿಮ ಪಾತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು 1998 ರಲ್ಲಿ ತೆರೆಕಂಡ ಬಾರಿಗೆ ‘ಕಿಲಾ’ದಲ್ಲಿ ಕಾಣಿಸಿಕೊಂಡಿದ್ದು ಅವರ ವೃತ್ತಿ ಬದುಕಿನಲ್ಲಿ ಕೊನೆ ಸಿನಿಮಾವಾಗಿತ್ತು.
ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎನ್ನಲಾಗಿದೆ . ಕುಮಾರ್ ನಿಧನಕ್ಕೆ ಬಾಲಿವುಡ್ ನಟರು, , ಅಭಿಮಾನಿಗಳು ಶೋಕ ವ್ಯಕ್ತಪಡಿಸಿದ್ದಾರೆ.

,

Leave a Reply

Your email address will not be published. Required fields are marked *