ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದಾನೆ. ಕಾಲೇಜು ಪ್ರಾಂಶುಪಾಲರನ್ನು ಕತ್ತರಿಸಿ ಫ್ರಿಡ್ಜ್ನಲ್ಲಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಚಾರ್ಯ ಕಾಲೇಜಿನ ಅಧಿಕೃತ ಇ-ಮೇಲ್ ಪರಿಶೀಲನೆ ವೇಳೆ ಈ ಸಂದೇಶ ಗಮನಕ್ಕೆ ಬಂದಿದೆ.
ಕಾಲೇಜಿನ ಆಡಳಿತ ಮಂಡಳಿ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದೆ, ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಎರಡು ದಿನಗಳ ಮೊದಲು ಬೆಂಗಳೂರು-ವಾರಾಣಸಿ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಹುಸಿ ಬೆದರಿಕೆ ಸಂದೇಶ ಬಂದತ್ತು. ಈ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಕೆನಡಾದ ಪ್ರಜೆಯನ್ನು ಬಂಧಿಸಲಾಗಿತ್ತು. ಕೆನಡಾದ ಪ್ರಜೆ ನಿಶಾಂತ್ ಯೋಹಾಂತನ್ ಇದ್ದಕ್ಕಿದ್ದಂತೆ ತಮ್ಮ ಬ್ಯಾಗ್ ಒಳಗೆ ಬಾಂಬ್ ಇದೆ ಎಂದು ಕೂಗಿದ್ದರು. ಹಾಗೆ ಕೂಗಿಕೊಂಡಿದ್ದರಿಂದ ಆತಂಕದ ಸನ್ನಿವೇಶ ಸೃಷ್ಟಿಯಾಗಿತ್ತು.
ನಂತರ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿಸಿ ಪ್ರಯಾಣಿಕರ ಲಗೇಜ್ಗಳ ಜೊತೆಗೆ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿತ್ತು. ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿತ್ತು.