Monday, September 07, 2026
Menu

ಮೈಸೂರು ರೈಲು ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ

ಅನಾಮಿಕ ವ್ಯಕ್ತಿಯೊಬ್ಬ ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ. ಬೆದರಿಕೆ ಕರೆಯು ಆಂಧ್ರ ಪ್ರದೇಶದಿಂದ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದಾನೆ. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿ ರೈಲ್ವೆ ಫ್ಲಾಟ್​ಫಾರಂ ಹಾಗೂ ರೈಲುಗಳನ್ನು ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Related Posts

Leave a Reply

Your email address will not be published. Required fields are marked *