Menu

ಸಿಎಂ ಡಿಸಿಎಂ ನಿವಾಸಗಳಿಗೆ ಬಾಂಬ್‌ ಬೆದರಿಕೆ ಸಂದೇಶ: ತನಿಖೆಗೆ ಎಸ್‌ಐಟಿ ರಚನೆ

ಸಿಎಂ ಮತ್ತು ಡಿಸಿಎಂ ಮನೆಗಳಲ್ಲಿ 4 ಕೆಜಿಯಷ್ಟು ಆರ್‌ಡಿಎಕ್ಸ್ ಮತ್ತು ಐಇಡಿ ಸ್ಫೋಟಕ ಇರಿಸಲಾಗಿದೆ. ಅವುಗಳನ್ನು ದೂರದಿಂದಲೇ ಸ್ಫೋಟಿಸಲಾಗುತ್ತದೆ ಎಂದು ಕಳೆದ ಶನಿವಾರ ಇ-ಮೇಲ್‌ ಮೂಲಕ ಹುಸಿ ಬೆದರಿಕೆ ಬಂದಿತ್ತು. ಈ ಹಿನ್ನೆಲೆ ಪೊಲೀಸ್‌ ಇಲಾಖೆ ಇಂಥ ಪ್ರಕರಣಗಳನ್ನು ಭೇದಿಸಲು ಎಸ್‌ಐಟಿ ರಚಿಸಿದೆ.

ಕಳೆದ ಶನಿವಾರ ಬೆಳಗ್ಗೆ 4:20ಕ್ಕೆ ಆರ್ನಾ ಅಶ್ವಿನ್ ಶೇಖರ್ ಎಂಬ ಮೇಲ್ ಐಡಿಯಿಂದ ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ಇಮೇಲ್ ಐಡಿ ಮತ್ತು ಡಿಸಿಎಂ ಅವರ ವೈಯಕ್ತಿಕ ಇಮೇಲ್ ಐಡಿಗೆ ಇಮೇಲ್ ಬೆದರಿಕೆ ಸಂದೇಶ ಬಂದಿತ್ತು. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿವಾಸಗಳನ್ನು ಸಂಪೂರ್ಣ ಶೋಧ ನಡೆಸಲಾಗಿತ್ತು. ಅರ್ನಾ ಅಶ್ವಿನ್ ಶೇಖರ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಕಳೆದ ವರ್ಷ ಅಕ್ಟೋಬರ್‌ 4ರಂದು ಬಸವನಗುಡಿಯ ಬಿಐಟಿ ಕಾಲೇಜಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿತ್ತು. ಕಾಲೇಜು ಆವರಣದಲ್ಲೇ ಹೈಡ್ರೋಜನ್‌ ಸುಧಾರಿತ ಐಇಡಿ ಇಟ್ಟಿದ್ದು, ಅದನ್ನು ಸ್ಫೋಟಿಸುವುದಾಗಿ ಬೆದರಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ವಿವಿ ಪುರಂ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ ಆರೋಪಿಯನ್ನು ಬಂಧಿಸಿದ್ದರು. ಆರೋಪಿಯಿಂದ ಲ್ಯಾಪ್‌ಟಾಪ್, ಮೊಬೈಲ್ ಫೋನ್‌ ವಶಕ್ಕೆ ಪಡೆಯಲಾಗಿತ್ತು. ಅದಕ್ಕೂ ಮೊದಲು ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು. ಡಿಕೆಶಿ ಮನೆ ಎದುರಿನ ಶಾಲೆಗೂ ಬಾಂಬ್ ಬೆದರಿಕೆ ಬಂದಿತ್ತು.

ಕೆಲವು ಶಾಲೆಗಳು, ಸರ್ಕಾರಿ ಕಚೇರಿಗಳಿಗೆ ಒಂದೂವರೆ ವರ್ಷದಿಂದ ಬಾಂಬ್‌ ಬೆದರಿಕೆ ಬರುತ್ತಲೇ ಇದೆ. ಬೆಂಗಳೂರಿನಲ್ಲಿ 34 ಪ್ರಕರಣಗಳು ದಾಖಲಾಗಿವೆ. ಮುಂಬೈನಲ್ಲಿ 27, ಚೆನ್ನೈ 22 ಪ್ರಕರಣಗಳು ದಾಖಲಾಗಿವೆ. ಹೀಗೆ ಬೆದರಿಕೆಯೊಡ್ಡುವವರ ಹಣೆಯಲು ಜಂಟಿ ಪೊಲೀಸ್ ಆಯುಕ್ತ ವಂಶಿಕೃಷ್ಣ ತನಿಖಾ ತಂಡ ರಚನೆ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *