Sunday, September 13, 2026
Menu

ನಮ್ಮ ಮೆಟ್ರೋಗೆ ಬಾಂಬ್‌ ಬೆದರಿಕೆ ಸಂದೇಶ

namma metro

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಸಿ ಇಮೇಲ್‌ ಬಂದಿದ್ದು, ಬಿಎಂಆರ್‌ಸಿಎಲ್‌ ಆತಂಕ ಎದುರಿಸುವಂತಾಗಿದೆ.  ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ (BMRCL) ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿಯು ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಸ್ಫೋಟ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.

ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಅಪರಿಚಿತ, ನಾನು ಉಗ್ರಗಾಮಿಯಂತೆ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಸ್ಫೋಟ ಮಾಡಬೇಕಾಗುತ್ತದೆ ಎಂದು ಬರೆದಿದ್ದು, ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ.

ಬಿಎಂಆರ್‌ಸಿಎಲ್ ಅಧಿಕಾರಿ ಮೇಲ್ ಪರಿಶೀಲಿಸಿದ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *