ಭಟ್ಕಳ ತಹಸೀಲ್ದಾರ್ ಕಚೇರಿಗೆ ಮಂಗಳವಾರ ಬೆಳಗ್ಗೆ ಪ್ರಬಲ ಬಾಂಬ್ ಸ್ಪೋಟವಾಗಲಿದೆ ಎಂದು ಹುಸಿ ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ‘ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ’ ಎಂಬ ಈಮೇಲ್ ಮೂಲಕ ಸಂದೇಶ ಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು: ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ಬೇಗ ತೆರವುಗೊಳಿ! ಎಂದು ಕನ್ನಡದಲ್ಲಿ ಎಚ್ಚರಿಕೆ ನೀಡಲಾಗಿದೆ.
ಯಾವುದೇ ಅನಾಹುತವಾಗದಂತೆ ತಡೆಯಲು ತಹಶೀಲ್ದಾರ್ ಕಚೇರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಾಂಬ್ ಹಾಗೂ ಡಾಗ್ ಸ್ಕ್ವಾಡ್ ಕಚೇರಿ ಆವರಣವನ್ನು ಪರಿಶೀಲಿಸಿವೆ. ಸಲು ಸಿದ್ಧತೆ ನಡೆಸಿವೆ.
ಅನಾಮಿಕ ಕಳುಹಿಸಿದ ಈಮೇಲ್‌ನಲ್ಲಿ ಬಾಂಬ್ ಬೆದರಿಕೆ ಮಾತ್ರವಲ್ಲದೆ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿದೆ. ಪ್ರಶಾಂತ್ ಕಿಶೋರ್ ಮತ್ತು ಸುನೀಲ್ ಕನುಗೋಲ್ ಸೂಚನೆಯಂತೆ ಡಿಎಂಕೆ ಸರ್ಕಾರವು 2001ರಲ್ಲಿ ಮಾಧ್ಯಮವನ್ನು ಬುಡಮೇಲು ಮಾಡಲು ಯತ್ನಿಸಿತ್ತು ಎಂದು ಆರೋಪಿಸಲಾಗಿದೆ.
ಕೆಲವು ದಿನಗಳ ಹಿಂದೆ ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ದಾಳಿಯ ಬೆದರಿಕೆ ಸಂದೇಶ ಬಂದಿತ್ತು. ಕಚೇರಿಯಲ್ಲಿ ‘ಬಾಂಬ್ ಬ್ಲಾಸ್ಟ್ ಮಾಡುತ್ತೇವೆ’ ಎಂದು ಉಲ್ಲೇಖಿಸಲಾತ್ತು. ಜಿಲ್ಲಾಡಳಿತ ತಕ್ಷಣವೇ ಬಾಂಬ್ ನಿಗ್ರಹ ದಳವನ್ನು ಸ್ಥಳಕ್ಕೆ ಕರೆಸಿ ಕಚೇರಿ ಆವರಣದಲ್ಲಿ ಯಾವುದೇಅಪಾಯಕಾರಿ ವಸ್ತುಗಳಿಲ್ಲ ಎಂಬುದನ್ನು ಖಚಿತಪಡಿಸಿಕೊಂಡಿದೆ.
ಸಂದೇಶದಲ್ಲಿ ತಮಿಳುನಾಡಿನಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ ಕಿರುಕುಳದ ಬಗ್ಗೆಯೂ ಉಲ್ಲೇಖಿಸಲಾಗಿತ್ತು. ಚೆನ್ನೈನ ಮೈಲಾಪುರ ಕ್ಷೇತ್ರದ ಮಾಜಿ ಶಾಸಕರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಲಾಗಿತ್ತು. ತಮಿಳುನಾಡು ಮುಖ್ಯ ಮಂತ್ರಿ ಎಂಕೆ ಸ್ಟಾಲಿನ್ ಸಹಾಯ ಮಾಡಬೇಕು ಎಂದು ಮನವಿ ಮಾಡಲಾಗಿತ್ತು. ಬೀದರ್ ಜಿಲ್ಲಾಧಿಕಾರಿ ಕಚೇರಿಗಳ ಮೇಲೆ ದಾಳಿ ನಡೆಸುವುದಾಗಿ ಬ್ಲಾಸ್ಟ್ ಮಾಡಲು ಐದು RDX ಪ್ಲಾಂಟ್‌ಗಳು ಕೋಲಾರ ಹಾಗೂ ಬೀದರ್‌ನಲ್ಲಿ ಇರುವುದಾಗಿ ಇಮೇಲ್ ನಲ್ಲಿ ಉಲ್ಲೇಖಿಸಲಾತ್ತು.


