ದೆಹಲಿಯ ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಮಾಡಿದ್ದ ಕಾಲೇಜೊಂದರ 12ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿದ್ಯಾರ್ಥಿಯು ತಾನು ಈ ಹಿಂದೆಯೂ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ದಕ್ಷಿಣ ಡಿಸಿಪಿ ಅಂಕಿತ್ ಚೌಹಾಣ್ ತಿಳಿಸಿದ್ದಾರೆ.
ವಿದ್ಯಾರ್ಥಿಯು ಪರೀಕ್ಷೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಬಾಂಬ್ ಬೆದರಿಕೆಯ ಮೂಲಕ ಉದ್ವಿಗ್ನತೆ ಸೃಷ್ಟಿಸಿ ಪರೀಕ್ಷೆ ಕ್ಯಾನ್ಸಲ್ ಆಗುವಂತೆ ಮಾಡಬೇಕೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಗಿ ಪೊಲೀಸ್ ವಿಚಾರಣೆಯ ವೇಳೆ ಹೇಳಿದ್ದಾನೆ.
ಬುಧವಾರ ದೆಹಲಿಯ16 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಪತ್ತೆ ದಳಗಳು ಶಾಲೆಗಳಲ್ಲಿ ಸಮೀಕ್ಷೆ ನಡೆಸಿ ಸುಳ್ಳು ಬೆದರಿಕೆ ಎಂದು ಪತ್ತೆ ಹಚ್ಚಿವೆ.