ಬೆಂಗಳೂರಿನ ಆರ್‌ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಹಾಗೂ ದೆಹಲಿಯ 50 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಚಾಮರಾಜಪೇಟೆ ವಿಸ್ಡಮ್ ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಯಲ್ಲಿದ್ದ 800 ಮಕ್ಕಳನ್ನು ಬೇರೆ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ.
ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳವು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಶಾಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಒಟ್ಟು ದೆಹಲಿಯ 50ಕ್ಕೂ ಅಧಿಕ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಮೇಲ್ ಹಾಗೂ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳದಿಂದಲೂ ಪರಿಶೀಲನೆ ನಡೆದಿದೆ. ಇಂದು ಬೆಳಿಗ್ಗೆ 7:30ಕ್ಕೆ ನಮಗೆ ಮೇಲ್ ಬಂದಿದೆ. ಕೂಡಲೇ ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದೆವು. ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಮಾನಸಿಕ ಸಮಸ್ಯೆ ಇರುವ ವ್ಯಕ್ತಿ ಮೇಲ್ ಮಾಡಿದ್ದಾನೆ, ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದ್ದು, ಘಟನೆ ಬಗ್ಗೆ ದೂರು ಕೊಡಲಾಗಿದೆ ಎಂದುಸೈಂಟ್ ಜರ್ಮನ್ ಶಾಲೆಯ ಪ್ರಿನ್ಸಿಪಲ್ ಮೋನಿಕಾ ಅಂಟೋನಿ ತಿಳಿಸಿದ್ದಾರೆ.