ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ = ಭ್ರಷ್ಟ ಸರ್ಕಾರ
ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ @BZZameerAhmedK ಅವರ ಮೇಲೆ ಗಂಭೀರ… pic.twitter.com/JriT3vkM6E
— R. Ashoka (@RAshokaBJP) June 20, 2025
ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಈ ಬಗ್ಗೆ ಅವರು ಪೋಸ್ಟ್ ಮಾಡಿದ್ದು, ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ಕರ್ನಾಟಕ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಶೋಕ್ ತಿಳಿಸಿದ್ದಾರೆ.
ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆ ಉಳಿದಿದೆ ಸಿಎಂ ಸಿದ್ಯದರಾಮಯ್ರೇಯನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್. ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಒತ್ತಾಯಿಸಿದ್ದಾರೆ.