ಕೇಂದ್ರ ಸರ್ಕಾರವು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆಗಳನ್ನು ರದ್ದುಗೊಳಿಸಲು ತೀರ್ಮಾನಿಸಿದೆ. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ನ ಆದೇಶದ ಆಧಾರದಲ್ಲಿ ರಾಷ್ಟ್ರಪತಿಗಳ ಅನುಮತಿಯೊಂದಿಗೆ ಜಾರಿಗೊಳಿಸಲಾಗಿದೆ.
ಆದೇಶದ ಪ್ರಕಾರ, ಕೇಂದ್ರ ಸರ್ಕಾರದ ಕಾರ್ಯಾಚರಣೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯಪತ್ರದಲ್ಲಿ ಈ ಆದೇಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ. ಸಂವಿಧಾನದ 145ನೇ ವಿಧಿಯು ಸುಪ್ರೀಂ ಕೋರ್ಟ್ಗೆ ತನ್ನ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಲು ಅಧಿಕಾರ ನೀಡಿದೆ. 2013ರ ಆದೇಶದ ಕ್ಲಾಸ್ 2ರ ನಿಯಮಗಳ 1, 2 ಮತ್ತು 3ನೇ ತಿದ್ದುಪಡಿಗಳನ್ನು ಮಾಡಿ ರಾಷ್ಟ್ರಪತಿಗಳ ಅನುಮತಿ ಪಡೆಯಲಾಗಿದೆ.
ಸರ್ಕಾರಿ ಉದ್ಯೋಗಿಗಳು ದಶಕಗಳಿಂದಲೂ ಎರಡನೇ ಮತ್ತು ನಾಲ್ಕನೇ ಶನಿವಾರದ ರಜೆ ಅನುಭವಿಸುತ್ತಿದ್ದರು. ಈಗ ಈ ಆದೇಶದಿಂದ ಅವರು ತಮ್ಮ ಕುಟುಂಬದೊಂದಿಗೆ ಕಳೆಯುವ ಸಮಯ ಕಡಿಮೆಯಾಗಲಿದೆ.