Tuesday, December 02, 2025
Menu

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ ಬೊಮ್ಮಾಯಿ ವ್ಯಂಗ್ಯ

basavaraj bommai

ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಯಿತು. ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಗೊಂದಲ ನಿವಾರಿಸುವಲ್ಲಿ ವಿಫಲವಾಗಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿದೆ ಕಾಂಗ್ರೆಸ್ ಹೈಕಮಾಂಡ್, ಯಾರು ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ. ಇದು ಒಂದು ಕುಟುಂಬದ ವಿಷಯ ಆಗಿದೆ ಎಂದು ಆರೋಪಿಸಿದರು

Related Posts

Leave a Reply

Your email address will not be published. Required fields are marked *