Menu

ಇನ್ಮುಂದೆ ಟ್ರಾಫಿಕ್‌ ರೂಲ್ಸ್‌ ಮುರಿದರೆ ದಂಡದ ಜತೆ ಕೇಸ್‌

ಬೆಂಗಳೂರು ನಗರದಲ್ಲಿ ಸಂಚಾರ ನಿಯಮಗಳನ್ನು ಬೇಕಾಬಿಟ್ಟಿ ಉಲ್ಲಂಘಿಸುವವರು ಇನ್ಮುಂದೆ ಕೇವಲ ದಂಡ ಪಾವತಿಸಿದರೆ ಸಾಕಾಗದು, ಅವರ ವಿರುದ್ಧ ಎಫ್‌ಐಆರ್‌ ಕೂಡ ದಾಖಲಾಗಲಿದೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಅನೂಪ್ ಶೆಟ್ಟಿ ಹೇಳಿದ್ದಾರೆ.

ಸಂಚಾರ ಸಿಗ್ನಲ್‌ಗಳನ್ನು ದಾಟುವುದು, ಏಕಮುಖ ಸಂಚಾರಕ್ಕೆ ಅಡ್ಡಿಪಡಿಸುವುದು ಮತ್ತು ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಜನನಿಬಿಡ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡಿದರೆ ಆವ್ಯಾಪ್ತಿಯ ಸಂಚಾರ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೊಲೀಸ್‌ ಅಂಕಿ ಅಂಶಗಳ ಪ್ರಕಾರ 2025ರ ಜನವರಿಯಿಂದ ನವೆಂಬರ್‌ವರೆಗೆ ಬೆಂಗಳೂರಿನಲ್ಲಿ 6,62,447 ಸಿಗ್ನಲ್ ಜಂಪಿಂಗ್ ಪ್ರಕರಣಗಳು ಹಾಗೂ 3,02,962 ನೋ-ಎಂಟ್ರಿ ಉಲ್ಲಂಘನೆಗಳು ದಾಖಲಾಗಿವೆ. ಏಕಮುಖ ರಸ್ತೆಯಲ್ಲಿನ ಸಂಚಾರ ಟ್ರಾಫಿಕ್​​ ಸಮಸ್ಯೆಗೆ ಜೊತೆಗೆ ಅಪಘಾತಗಳಿಗೂ ಎಡೆಮಾಡಿಕೊಡುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಾಗಲಿದೆ. ಬಸ್​​ ಹಾಗೂ ರೈಲು ನಿಲ್ದಾಣಗಳ ಬಳಿ ರಸ್ತೆ ಮೇಲೆ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುವ ಆಟೋ ಹಾಗೂ ಕಾರುಗಳ ಮೇಲೂ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈವರೆಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದವರು ಸ್ಥಳದಲ್ಲೇ ದಂಡ ಪಾವತಿಸಿ ಮತ್ತೆ ಅದೇ ತಪ್ಪು ಮಾಡುತ್ತಿದ್ದರು. ಇನ್ಮುಂದೆ ಕೋರ್ಟ್‌ ಅನ್ನು ಸಂಪರ್ಕಿಸಬೇಕು. ಇದು ದೀರ್ಘ ಪ್ರಕ್ರಿಯೆಯಾಗಿರುವುದು ಎಂದು ಅವರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *