ಯುಪಿಐ ವಿಚಾರಕ್ಕೆ ಸಂಬಂಧಿಸಿದಂತೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕಾಗಿ ಒಂದು ವೇಳೆ ಬೇಡಿಕೆ ಇಟ್ಟರೆ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು ಸಹಾಯವಾಣಿ ದೂರವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00) ಸಂಪರ್ಕಿಸಲು ಇಲಾಖೆ ಕೋರಿದೆ.
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಯುಪಿಐ ಸಮಸ್ಯೆ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅಥವಾ ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪ್ರಸಾರವಾಗಿದೆ. ಸಮಸ್ಯೆ ಪರಿಹರಿಸುವುದಾಗಿ ಕೆಲವು ಮಧ್ಯವರ್ತಿಗಳು ಹೇಳಿ ವರ್ತಕರಲ್ಲಿ ಹಣದ ಬೇಡಿಕೆ ಇಡುತ್ತಿದ್ದಾರೆಂಬ ಆರೋಪಗಳೂ ಕೇಳಿ ಬಂದಿವೆ ಎಂದು ಇಲಾಖೆ ತಿಳಿಸಿದೆ.
ವಾಣಿಜ್ಯ ತೆರಿಗೆ ಇಲಾಖೆಯು ಇಂಥ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲು ಮುಂದಾಗಿದೆ. ವರ್ತಕರು ಇಂಥ ಪ್ರಕರಣಗಳನ್ನು ಕೂಡಲೇ ಗಮನಕ್ಕೆ ತರುವಂತೆ ಆದೇಶದಲ್ಲಿ ತಿಳಿಸಿದೆ.