Menu

ಬ್ರಿಡ್ಜ್ ಮ್ಯಾನ್’ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ನಿಧನ

ದೇಶದ ಬ್ರಿಡ್ಜ್‌ ಮ್ಯಾನ್‌ ಎಂದು ಹೆಸರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಮಂಗಳವಾರಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಭಾರದ್ವಾಜ್ ಪಯಸ್ವಿನಿ ನದಿಯಿಂದ ಸಾಧನೆಯ ಪಯಣ ಆರಂಬಿಸಿದ್ದರು. 1950 ರ ಮೇ 2 ರಂದು ಸುಳ್ಯದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್ 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. 1989ರಲ್ಲಿ ಸ್ವಗ್ರಾಮ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸಿದ್ದರು.

ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿದ ಹೆಗ್ಗಳಿಕೆ ಅವರದು. ಈ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ 2017 ರಲ್ಲಿ ‘ಪದ್ಮಶ್ರೀ’ ನೀಡಿ ಗೌರವಿಸಿತ್ತು.

ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ನಾಡಿನ ಗಣ್ಯರು, ತಾಂತ್ರಿಕ ವಲಯದ ತಜ್ಞರು ಹಾಗೂ ಗ್ರಾಮೀಣ ಭಾಗದ ಜನತೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಸಂತಾಪ ಸಲ್ಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *