ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2014 ರ ನಂತರ ಸ್ಥಾಪಿಸಲಾದ ಐಐಟಿಗಳಲ್ಲಿ ಹೆಚ್ಚುವರಿ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುವುದು. ಐಐಟಿ ಪಾಟ್ನಾವನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದು, ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.
ಕಥತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ, 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ 60 ಸಾವಿರದಿಂದ 1.35 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವೆ ಪ್ರಕಟಿಸಿದ್ದಾರೆ.
ಐಐಟಿ ಮತ್ತು ಐಐಎಂಗಳಲ್ಲಿ 10 ಸಾವಿರ ಫೆಲೋಶಿಪ್, ಕೌಶಲ್ಯ ಕೋರ್ಸ್‌ಗಳಿಗಾಗಿ 50 ಸಾವಿರ ಅಟಲ್ ಟಿಕರಿಂಗ್ ಲ್ಯಾಬ್‌ಗಳ ನಿರ್ಮಾಣ. ಭಾರತೀಯ ಭಾಷಾ ಪುಸ್ತಕ ಯೋಜನೆಯ ಸಹಾಯದಿಂದ ಶಾಲೆ ಮತ್ತು ಉನ್ನತ ಶಿಕ್ಷಣಕ್ಕಾಗಿ ಡಿಜಿಟಲ್ ಪುಸ್ತಕಗಳು ಲಭ್ಯವಿರುತ್ತವೆ. ನ್ಯಾಷನಲ್ ಸೆಂಟರ್ ಫಾರ್ ಸ್ಕಿಲ್ಲಿಂಗ್ ಅಡಿಯಲ್ಲಿ 5 ಹೊಸ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.