ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು.
ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಅಸು ನೀಗಿದ್ದಾರೆ. ಇರ್ಫಾನ್ ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು, ಆದರೆ ಶಂಶೋದ್ದೀನ್ ಕೃಷಿಯಲ್ಲಿ ಜೀವನ ಮಾಡುತ್ತಿದ್ದರು.
ರಾಜ್ಯದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಅಕಾಲಿಕ ಸಾವಿಗೀಡಾಗುತ್ತಿರುವ ವಿಚಾರ ವರದಿಯಾಗುತ್ತಲೇ ಇರುತ್ತದೆ. ವೈದ್ಯರು, ಪೊಲೀಸರು, ಕಾರ್ಮಿಕರು, ಶಿಕ್ಷಕರು, ಮಕ್ಕಳು, ಯುವಕರೆನ್ನದೆ ಹೃದಯಾಘಾತದಿಂದ ಅಕಾಲಿಕವಾಗಿ ಸಾವಿಗೀಡಾಗುತ್ತಿರುವುದು ಕಳವಳಕಾರಿ ವಿಚಾರ.