ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು ಜುಲೈ 26: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು, ದುಃಖದಿಂದಿಲ್ಲ ಅತ್ಯಂತ ಸಂತೋಷದಿಂದಲೇ ತೀರ್ಮಾನಿಸಿದ್ದೇನೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕೆಂದು ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ. ಮಧ್ಯಾಹ್ನವೇ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ಈ ಮೂಲಕ ಒಂದು ವಾರದಿಂದ ನಡೆಯುತ್ತಿರುವ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಂತಾಗಿದೆ. ಪ್ರವಾಹ, ಕೋವಿಡ್‍ನಂತಹ ಗಂಭೀರ ಪರಿಸ್ಥಿತಿಯ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಕೂಗು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹೈಕಮಾಂಡ್‍ನಿಂದ ಸೂಚನೆ ಬಂದರೆ ತಾವು ಅದಕ್ಕೆ ಬದ್ಧರಾಗಿರುವುದಾಗಿ ಯಡಿಯೂರಪ್ಪ ಹೇಳುತ್ತಲೇ ಬಂದಿದ್ದಾರೆ.

ಈ ನಡುವೆ ನಿನ್ನೆ ಗೋವಾದಲ್ಲಿ ಮಾತನಾಡಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿಯನ್ನು ಹೊಗಳಿದ್ದು, ಕರ್ನಾಟಕದಲ್ಲಿ ಯಾವುದೇ ರಾಜಕೀಯ ಬೆಳವಣಿಗೆಗಳು ಇಲ್ಲ ಎಂದು ಹೇಳಿದ್ದರು.

 

 

,

Leave a Reply

Your email address will not be published. Required fields are marked *