ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕೇರಳದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್ (45), ಸಕೀರ್ (27) ಎಂದು ಗುರುತಿಸಲಾಗಿದೆ.
ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ, ಬಸ್ ಡ್ರೈವರ್ ಸೀಟ್ ಇಲ್ಲದಿದ್ರೂ ಹನದ ಆಸೆಗಾಗಿ ಮುಂಭಾಗದ ಕ್ಯಾಬಿನ್‌ನಲ್ಲಿ ನಾಲ್ವರನ್ನೂ ಕೂರಿಸಿದ್ದರಿಂದ ಅಪಘಾತದ ರಭಸಕ್ಕೆ ನಾಲ್ವರು ಪ್ರಾಣ ಕಳೆದುಕೊಂಡಿರುವುದಾಗಿ ಸ್ಥಳೀಯರು ದೂರಿದ್ದಾರೆ.


