Wednesday, August 19, 2026
Menu

ಬೀಳಗಿ ಕ್ರಾಸ್‌ನಲ್ಲಿ ಉರುಳಿದ ಬಸ್‌: ಇಬ್ಬರ ಸಾವು

ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್‌  ಹುಬ್ಬಳ್ಳಿ- ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ  ಮಹಾರಾಷ್ಟ್ರದ ನೋಂದಣಿ ಸಂಖ್ಯೆ ಹೊಂದಿರುವ ಖಾಸಗಿ ಬಸ್‌  ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೈದರಾಬಾದ್‌ನಿಂದ ಗೋವಾ ಕಡೆಗೆ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಮಹಾರಾಷ್ಟ್ರ ಪಾಸಿಂಗ್‌ನ ಖಾಸಗಿ ಸ್ಲೀಪರ್ ಬಸ್ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ವೇಳೆ ಬಸ್‌ನಲ್ಲಿ 15ರಿಂದ 20 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ, ಅಪಘಾತದಲ್ಲಿ ಬೈಕ್ ಸವಾರ ಬೈಕ್ ಸವಾರ ಅಮರಸಿದ್ದ ಕಾಂಬಳೆ (34) ಮತ್ತು ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ.

ಗಾಯಗೊಂಡಿರುವ ಹಲವು ಪ್ರಯಾಣಿಕರನ್ನು ಬೀಳಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿದ್ದ ಬಸ್ ಅನ್ನು ಕ್ರೇನ್ ಮೂಲಕ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *