ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿದ್ದ ಸಾರಿಗೆ ಬಸ್ಸಿನ ಟೈರ್ ತೂತುಕುಡಿ ಬಳಿ ಸ್ಫೋಟಗೊಂಡು ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಏಳು ಮಂದಿ ಪ್ರಾಣ ಕಳೆದುಕೊಂಡಿ ದ್ದಾರೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ.
ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ಟೈರ್ ಸ್ಫೋಟಗೊಂಡು ಬಸ್ ಚಲಿಸುತ್ತಿದ್ದ ದಿಕ್ಕನ್ನೇ ಬದಲಿಸಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ದುರಂತಕ್ಕೆ ವಿಷಾದಿಸಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ.


