ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 18 ಕನ್ವಾರಿಯಾ ಯಾತ್ರಿಗಳು ಮೃತಪಟ್ಟ ದಾರುಣ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.
ದಿಯೋಘರ್‌ನಲ್ಲಿ ಶ್ರಾವಣ ಮಾಸದ ಕನ್ವಾರಾ ಯಾತ್ರೆಯ ಸಮಯದಲ್ಲಿ ಬಸ್ ಮತ್ತು ಟ್ರಕ್ ಅಪಘಾತದಿಂದಾಗಿ 18 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಬಾಬಾ ಬೈದ್ಯನಾಥ್ ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.
ಸೋಮವಾರ ಬೆಳಿಗ್ಗೆ 4.30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ.
ಅಪಘಾತಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಭಕ್ತರ ಸಾವಿನ ಬಗ್ಗೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಡಳಿತವು ಗಾಯಾಳುಗಳಿಗೆ ವೈದ್ಯಕೀಯ ಸೌಲಭ್ಯಗಳ ಜೊತೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಒದಗಿಸುತ್ತಿದೆ ಎಂದು ಹೇಳಿದ್ದಾರೆ.