ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಲ್ಯಾಂಡ್ ಫೋರ್ಡ್ ನಗರದಲ್ಲಿರುವ ಮನೆ ಬಳಿಯ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಐಟಿ ದಾಳಿ ವೇಳೆಯೇ ಉದ್ಯಮಿ ಸಿಜೆ ರಾಯ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಪದೇಪದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಗುರುವಾರವೂ ದಾಳಿ ಆಗಿತ್ತು ಎಂದು ಹೇಳಲಾಗಿದೆ. ಪದೇಪದೆ ಐಟಿ ದಾಳಿಯಿಂದ ಬೇಸತ್ತು ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಶೋಕನರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮರಣೋತ್ತರ ಪರೀಕ್ಷೆಗೆ ಶವವನ್ನು ಕಳುಹಿಸಿಕೊಡಲಾಗಿದೆ.
ಬೆಂಗಳೂರಿನಲ್ಲಿ 65ಕ್ಕೂ ಹೆಚ್ಚು ರಿಯಲ್ ಎಸ್ಟೇಟ್ ಯೋಜನೆಗಳನ್ನು ರೂಪಿಸುವ ಮೂಲಕ ಪ್ರಮುಖ ಉದ್ಯಮಿಯಾಗಿ ಬೆಳೆದಿದ್ದರು. ಬೆಂಗಳೂರು ಮಾತ್ರವಲ್ಲದೇ ಹಲವು ರಾಜ್ಯ ಹಾಗೂ ದುಬೈನಲ್ಲಿ ಕೂಡ ಆಸ್ತಿ ಹೊಂದಿದ್ದರು ಎಂದು ಹೇಳಲಾಗಿದೆ.


