ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದಾರೆ.
ರನ್ಯಾ ರಾವ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ ಪುತ್ರ ತರುಣ್ ರಾಜು ಅವರನ್ನು ವಿಚಾರಣೆಗೊಳಪಡಿಸಿದ್ದು ಮಧ್ಯಾಹ್ನದ ವೇಳೆಗೆ ಬಂಧಿಸಿದ್ದಾರೆ.
ರನ್ಯಾ ರಾವ್ ಮತ್ತುತರುಣ್ ರಾಜು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದು, ರನ್ಯಾ ರಾವ್ ಮೂಲಕ ತರುಣ್ ರಾಜು ಚಿನ್ನ ದುಬೈನಿಂದ ತರಿಸಿಕೊಳ್ಳುತ್ತಿದ್ದ ಎಂದು ಹೇಳಲಾಗಿದೆ.