ಬೆಂಗಳೂರು ಸುರಂಗ ಮಾರ್ಗದ ಪೂರಕ ಕಾಮಗಾರಿಗೆ 2215 ಕೋಟಿ ರೂ. ಅಂದಾಜು ಮೊತ್ತ ವೆಚ್ಚ ಹಾಗೂ 8 ವಿಧೇಯಕಗಳಿಗೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸಭೆಯ ಮಾಹಿತಿಯನ್ನು ಸಚಿವ ಕೆ.ಎಚ್. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ನೀಡಿದರು.
ಬೆಂಗಳೂರಿನಿಂದ ಹೆಬ್ಬಾಳದಿಂದ ಮೇಖ್ರಿ ಯವರೆಗೆ ಅವಳಿ ಸುರಂಗ ರಸ್ತೆ ನಿರ್ಮಾಣಕ್ಕಾಗಿ ಪೂರಕವಾಗಿ ಎಲಿವೇಟೆಡ್ ಕಾಮಗಾರಿಗಳ ನಿರ್ಮಿಸಲು 2215 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ರಾಜ್ಯ ಸಂಪುಟ ಸಭೆಯ ಮುಖ್ಯಾಂಶಗಳು
ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಒಪ್ಪಿಗೆಯನ್ನು ನೀಡಲಾಗಿದೆ. ಬಯಲುಸೀಮೆ ತಿದ್ದುಪಡಿ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಿದೆ. ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಧಾರ್ಮಿಕ ದತ್ತಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕಕ್ಕೆ ಒಪ್ಪಿಗೆ ನೀಡಿದೆ ಎಂಬುದಾಗಿ ಹೇಳಿದರು.
ಸಾಮಾಜಿಕ ಬಹಿಷ್ಕಾರ ನಿಷೇಧ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ. ಒಟ್ಟು 8 ಬಿಲ್ ಗೆ ಅನುಮೋದನೆ ಮಾಡಿದ್ದೇವೆ. ಮತೀಯ ದ್ವೇಷ ಭಾಷಣವೂ ಇದರಲ್ಲಿ ಸೇರಿದೆ. ದ್ವೇಷ ಭಾಷಣ,ಸೈದ್ಧಾಂತಿಕ ನಿಲುವುಗಳ ಬಗ್ಗೆ ಸ್ಪಷ್ಟವಾಗಿದೆ. ವಿಧೇಯಕದಲ್ಲಿ ಬಹಳ ಸ್ಪಷ್ಟವಾಗಿ ತಿಳಿಸಲಾಗಿದೆ ಎಂದರು.
ವಿಶ್ವಬಂಡವಾಳ ಹೂಡಿಕೆ ಸಮಾವೇಶ-2025ರ ಕಾರ್ಯಕ್ರಮಕ್ಕೆ ತಗುಲಿದ 100.70 ಕೋಟಿ ಗೆ ಅನುಮೋದನೆ ನೀಡಿದೆ. 5172 ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಗಣಕೀರಣ ಮಾಡಲಾಗುತ್ತಿದೆ. ಫ್ಯಾಕ್ಸ್ ಸೇವೆಗೆ 13 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಒಳನಾಡು ಇಲಾಖಾ ನಿಯಮಗಳಿಗೆ ತಿದ್ದುಪಡಿಗೆ ನಿರ್ಧರಿಸಲಾಗಿದೆ ಎಂದರು.
ಗದಗ, ಕಲಬುರಗಿ, ದಾವಣಗೆರೆ, ಕೆಂಗೇರಿಯಲ್ಲಿ ಕೌಶಲ್ಯಾಧಾರಿತ ಪ್ರಯೋಗಾಲಯಗಳ ಸ್ಥಾಪನೆಗೆ 452 ಕೋಟಿ ಅಂದಾಜು ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ. ಕೊಪ್ಪಳ ಜಿಲ್ಲಾಸ್ಪತ್ರೆ ಆವರಣದಲ್ಲಿ ಕಾಮಗಾರಿಗೆ 28 ಕೋಟಿ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಲಾಗಿದೆ. 19 ಮೊರಾರ್ಜಿ ದೇಸಾಯಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ 304 ಕೋಟಿ ವೆಚ್ಚಕ್ಕೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗೆ ಅನುಮೋದನೆ ನೀಡಲಾಗಿದೆ. ಕುರಿ, ಮೇಕೆಗಳ ನೀಲಿ ನಾಲಿಗೆ ರೋಗಕ್ಕೆ ಲಸಿಕೆ ನೀಡಲಾಗುತ್ತದೆ. ಹೊಸದಾಗಿ ಲಸಿಕೆ ಕಂಡು ಹಿಡಿಯಲು ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ. ಹೆಬ್ಬಾಳದಲ್ಲಿ ಒಶುವೈದ್ಯಕೀಯ ವಿವಿಗೆ ಅವಕಾಶ ನೀಡಲಾಗಿದೆ. 27 ಕೋಟಿ ವೆಚ್ಚಕ್ಕೆ ಸಂಪುಟ ಅನುಮೋದನೆ ನೀಡಿದೆ.
334 ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ 216 ಕೋಟಿ ವೆಚ್ಚಕ್ಕೆ ಸಂಪುಟದ ಒಪ್ಪಿಗೆ ನೀಡಲಾಗಿದೆ. 25 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೆ 80 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಡಿಪ್ಲೋಮಾ ತೇರ್ಗಡೆಯಾದವರನ್ನ ಅಪ್ರೆಂಟಿಸ್ ಹುದ್ದೆಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. 1000 ಡಿಪ್ಲೋಮಾ ಹೋಲ್ಡರ್ ಗಳಿಗೆ ಅವಕಾಶ ನೀಡಲಾಗುತ್ತಿದೆ. ಸ್ಟೈಫಂಡ್ ಆಧಾರದಲ್ಲಿ ನೇಮಕಕ್ಕೆ ಒಪ್ಪಿಗೆ ನೀಡಿದೆ ಎಂದರು.
ಕುಸುಗಲ್ ಗ್ರಾಮದಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಜಾಗ ಮಂಜೂರು ಮಾಡಲು ನಿರ್ಧರಿಸಲಾಗಿದೆ. ಗಂಡಸಿಗೆ ಬಹುಗ್ರಾಮ ಕುಡಿಯುವ ನೀರು ಮಂಜೂರು. 530 ಜನವಸತಿ ಪ್ರದೇಶಗಳಿಗೆ ನೀರಿನ ಯೋಜನೆಗೆ ನಿರ್ಧರಿಸಲಾಗಿದೆ. ಕೆ.ಆರ್.ಪೇಟೆ, ನಾಗಮಂಗಲದಲ್ಲಿ ಕೆರೆ ತುಂಬಿಸುವ ಯೋಜನೆ ನೀಡಲಾಗಿದೆ. 63 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಿದೆ. ಚಡಚಡ 9016 ಹೆಕ್ಟೇರ್ ಪ್ರದೇಶಕ್ಕೆ ಏತನೀರವಾರಿ ಯೋಜನೆಯಾಗಿದೆ. 485 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಕಡ್ಡಾಯವಿಲ್ಲ. 1 ರಿಂದ 5ನೇ ತರಗತಿ ಶಿಕ್ಷಕರಿಗೆ ಅನ್ವಯವಿಲ್ಲ. ಅಗತ್ಯ ವಿಷಯಗಳಲ್ಲಿ ಪರಿಣತಿ ಹೊಂದಿದ್ದರೆ ಸಾಕು. ಟಿಇಟಿ ಪ್ರಮಾಣ ಪತ್ರ ಕಡ್ಡಾಯ ಬೇಕಿಲ್ಲ. 800 ಸರ್ಕಾರಿ ಶಾಲೆಗಳ ಉನ್ನತೀಕರಣ ಮಾಡಲಾಗುತ್ತಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮಾಡಲು ಅವಕಾಶ ನೀಡಲಾಗುತ್ತಿದೆ. ಪರಿಷ್ಕೃತ ಡಿಪಿಆರ್ ತಯಾರಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಬಳ್ಳಾರಿ, ಕಲಬುರಗಿ, ತುಮಕೂರುಗಳಲ್ಲಿ ಹಸಿತ್ಯಾಜ್ಯ ಸಂಸ್ಕರಣಾ ಘಟಕ 120, 150 ಹಸಿತ್ಯಾಗ ಸಂಸ್ಕರಣ ಘಟಕ ನಿರ್ಮಾಣ. ಗೇಲ್ ಸಂಸ್ಥೆಗೆ 25 ಲೀಸ್ ಗೆ ನೀಡಲು ಅನುಮತಿ ನೀಡಲಾಗುತ್ತಿದೆ. ನಗರಯೋಜನಾ ಪ್ರಾಧಿಕಾರಿಗಳಲ್ಲಿ ಲಭ್ಯವಿರುವ ನಿವೇಶನಗಳು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ದೇವನಹಳ್ಳಿಯಲ್ಲಿ 1777 ಎಕರೆ ಭೂಮಿ ಅಕ್ವೈರ್ ಮಾಡಿದ್ದೆವು. ರೈತರ ಪ್ರತಿಭಟನೆಯಿಂದ ಕೈಬಿಡಲಾಗಿತ್ತು. ಚನ್ನರಾಯಪಟ್ಟಣ ಹೋಬಳಿ 13 ಗ್ರಾಮಗಳಲ್ಲಿ ಭೂಸ್ವಾಧೀನದಿಂದ ಕೈಬಿಡಲಾಗಿದೆ ಎಂದರು.
ಬೆಳಗಾವಿಯಲ್ಲಿ ಅಧಿವೇಶನ ನಡೆಯಲಿದೆ. ಅದಕ್ಕೆ ಸೂಕ್ತ ತಯಾರಿಯ ಬಗ್ಗೆ ಚರ್ಚಿಸಿದ್ದೇವೆ. ಯಾವುದೇ ಚರ್ಚೆಗಳು ಬರಲಿ ಎದುರಿಸಲು ನಿರ್ಧಾರಿಸಲಾಗಿದೆ. ಸಿಎಂ ಸಲಹೆ, ಸೂಚನೆಗಳನ್ನ ನೀಡಿದ್ದಾರೆ. ಮೆಕ್ಕೆಜೋಳ ಖರೀದಿ ಬಗ್ಗೆ ಪ್ರಯತ್ನ ನಡೆಸಿದ್ದೇವೆ. ಹದಿನೇಳುವರೆ ಲಕ್ಷ ಹೆಕ್ಟೇರ್ ನಲ್ಲಿ ಜೋಳ ಬೆಳೆಯಲಾಗಿದೆ. ಸುಮಾರು 54 ಲಕ್ಷ ಟನ್ ಬೆಳೆ ಬಂದಿದೆ.
ಜೋಳ ಖರೀದಿಗೆ ಎಥೆನಾಲ್ ಕಂಪನಿಗಳಿಗೆ ಸೂಚಿಸಿದ್ದೇವೆ. ಕೇಂದ್ರದ ಸೂಚನೆ ಮೇರೆಗೆ ಸೂಚಿಸಿದ್ದೇವೆ. 238 ರೂ ರಾಜ್ಯ ಸರ್ಕಾರ ನೀಡಲಿದೆ. ರೈತರಿಗೆ 2400 ರೂ ನಂತೆ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಎಂಎಫ್ ನಿಂದಲೂ ಖರೀದಿಗೆ ಸೂಚನೆ ನೀಡಲಾಗಿದೆ. ಪೌಲ್ಟ್ರಿಯವರು ಖರೀದಿಗೆ ಮುಂದೆ ಬಂದಿದ್ದಾರೆ. ಅವರೆಲ್ಲರು ಬಂದರೆ ರೈತರಿಗೆ ಪರಿಹಾರ ಸಿಗಲಿದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.


